

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ದೇಶದ ಕೃಷಿ ಕ್ಷೇತ್ರ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದೆ ತಿರಸ್ಕರಿಸಬೇಕು ಎಂದು ದೆಹಲಿ ರೈತ ಹೋರಾಟಗಾರ ಯೋಗೇಂದ್ರ ಯಾದವ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರೈತರ ಹಿತ ಕಾಪಾಡುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ. ಹಿಂದಿನ ಚುನಾವಣೆ ವೇಳೆ ನೀಡಿದ್ದ ರೈತರ ಆದಾಯ ಆದಾಯ ದ್ವಿಗುಣಗೊಳಿಸುವ ಭರವಸೆ ಇನ್ನೂ ಈಡೇರಿಲ್ಲ. ಕನಿಷ್ಠ ಪಕ್ಷ ಶೇಕಡಾ ಎಷ್ಟು ಅಧಿಕವಾಗಿದೆ ಎಂಬುದನ್ನಾದರೂ ರೈತರಿಗೆ ತಿಳಿಸಬೇಕು ಎಂದರು.
ರಾಸಾಯನಿಕ ಗೊಬ್ಬರ ಬೆಲೆ ಏರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಇಳಿದಿದ್ದರೂ ದೇಶದಲ್ಲಿ ಇಂಧನ ಬೆಲೆ ಇಳಿಕೆಯಾಗಿಲ್ಲ. ಹೀಗಾಗಿ ರೈತರು, ಸಾರ್ವಜನಿಕರು ಮತ್ತಷ್ಟು ಸಂಕಷ್ಟಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿ ಸೋಲಿಸಬೇಕು ಎಂದರು.
ಆಪ್ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ, ರಾಜೇಂದ್ರ ಸಿಂಗ್ ಟೀಕಾಯತ್ ಸೇರಿ ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಸೋಲಿಸಿ ಎಂದು ಅಭಿಯಾನ ಮಾಡುತ್ತಿದ್ದೇವೆ. ರೈತರು ಮತ್ತು ಕೃಷಿ ಉಳಿಯಲು ಈ ಬಾರಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಆಗ್ರಹಿಸಿದರು.
ರಾಜಶೇಖರ ಅಕ್ಕಿ, ಸಿ.ಜಿ. ಪಾಟೀಲ, ವಾಸು, ಸಂಜೀವ ಇತರರು ಇದ್ದರು.