ಪ್ರತಿ ಮನೆಗೆ ಶುದ್ಧ ನೀರು ಪೂರೈಕೆ ಜೆಜೆಎಂ ಉದ್ದೇಶ

14-DVD-1
ದೇವದುರ್ಗ ತಾಲೂಕಿನ ಹೊನ್ನಟಗಿಯಲ್ಲಿ ಕುಡಿವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ಜಿಪಂ ಎಇಇ ವೆಂಕಟೇಶ ಗಲಗ ಮಂಗಳವಾರ ಪರಿಶೀಲಿಸಿದರು. ಜಿಪಂ ಜೆಇ ಜಯದೇವ್, ಇಂಜಿನಿಯರ್ ಅಲ್ಲಾಭಕ್ಷಿ ಇತರರಿದ್ದರು.
Published on

ದೇವದುರ್ಗ: ಹೊನ್ನಟಗಿ ಗ್ರಾಮದಲ್ಲಿ ಪ್ರಧಾನಮಂತ್ರಿ ಜಲಜೀವನ ಮಿಷನ್ ಕಾಮಗಾರಿಗೆ 70 ಲಕ್ಷ ರೂ. ಮಂಜೂರಾಗಿದ್ದು, ಟೆಂಡರ್ ಕರೆಯಲಾಗಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಪಂ ಎಇಇ ವೆಂಕಟೇಶ ಗಲಗ ಹೇಳಿದರು.

ಹೇಮನಾಳ ಗ್ರಾಪಂ ವ್ಯಾಪ್ತಿಯ ಹೊನ್ನಟಗಿ ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕ ಪರಿಶೀಲಿಸಿ ಮಂಗಳವಾರ ಮಾತನಾಡಿದರು. ಪ್ರತಿಯೊಂದು ಮನೆಗೆ ಶುದ್ಧ ಕುಡಿವ ನೀರು ಒದಗಿಸುವುದು ಜೆಜೆಎಂ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪರ್ಯಾಯವಾಗಿ 20 ಲಕ್ಷ ರೂ. ವೆಚ್ಚದಲ್ಲಿ ಕುಡಿವ ನೀರಿನ ಟ್ಯಾಂಕ್ ಕಾಮಗಾರಿ ಕೈಗೊಳ್ಳಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಬೇಸಿಗೆಯಲ್ಲಿ ಯಾವುದೇ ಹಳ್ಳಿಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಶಾಲಾ ಕೊಠಡಿ ಶಿಥಿಲಗೊಂಡಿರುವ ಬಗ್ಗೆ ಮಾಹಿತಿ ಇದ್ದು ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ವೆಂಕಟೇಶ ಗಲಗ ತಿಳಿಸಿದರು. ಪ್ರಮುಖರಾದ ಶಾಂತಕುಮಾರ ಹೊನ್ನಟಗಿ, ಹುಲುಗಪ್ಪ, ಮಾರೆಪ್ಪ ಹೊನ್ನಟಗಿ, ಎನ್ ಅಬ್ರಾಮ್, ಬೂದೆಪ್ಪ ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net