

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಮರು ಸ್ಥಾಪಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದರು.
ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಸೇವಾರ್ಥದ ‘ಪಾರ್ವತಮ್ಮ-ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ’ ಉದ್ಘಾಟಿಸಿ ಮಾತನಾಡಿದರು.
ಕೋಟ್ಯಂತರ ಹಿಂದುಗಳ ಸಂಕಲ್ಪವಾಗಿದ್ದ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ. ಕಾಶಿ ಕಾರಿಡಾರ್, ಮಹಾಕಾಳೇಶ್ವರ ಕಾರಿಡಾರ್‌ಗಳನ್ನು ಮಾಡುವ ಮೂಲಕ ಅಲ್ಲಿನ ಪುನರುಜ್ಜೀವನಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲ, ಸಂಸ್ಕೃತಿ, ಯೋಗ, ಆಯುರ್ವೇದ, ಉಳಿವಿಗಾಗಿಯೂ ಅನೇಕ ಕೊಡುಗೆ ನೀಡಿದ್ದಾರೆ. ದೇಶದ ಸುರಕ್ಷತೆ ಬಗ್ಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದು ಅಮಿತ್ ಷಾ ಹರ್ಷ ವ್ಯಕ್ತಪಡಿಸಿದರು.