ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

sri ramulu feb 20 2020
Published on

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ಪುತ್ರಿ ವಿವಾಹಕ್ಕೆ ಶುಭ ಕೋರಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಬಳ್ಳಾರಿ ರಕ್ಷಿತಾ ಹಾಗೂ ಲಲಿತ್ ಸಂಜೀವರೆಡ್ಡಿ ಅವರಿಗೆ ಒಳ್ಳೆಯದಾಗಲಿ. ಎರಡು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಗೆ ಶುಭವಾಗಲಿ ಎಂದು ಅವರು ಪತ್ರ ಬರೆದು ಹರಸಿದ್ದಾರೆ.

ಸಚಿವ ಶ್ರೀರಾಮುಲು ಅವರು ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾ.5ರಂದು ನಡೆಯುವ ಪುತ್ರಿಯ ವಿವಾಹಕ್ಕೆ ಆಮಂತ್ರಣ ನೀಡಿ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶುಭಾಶಯ ಕೋರಿ ಪತ್ರ ಬರೆದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net