

ಮೈಸುರು: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಮೈಸೂರಿಗೆ ಆಗಮಿಸಲಿದ್ದು, ಅಂದು ಸಂಜೆ 4 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು-ಕೊಡಗು, ಮಂಡ್ಯ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಪೂರಕವಾದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಜೆಡಿಎಸ್ ರಾಜ್ಯಧ್ಯಕ್ಷರು ಆದ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ಈ ಮೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಮೈಸೂರು ಪ್ರವಾಸ ಮತ್ತಷ್ಟು ಮಹತ್ವ ಪಡೆದುಕೊಳ್ಳಲಿದ್ದು, ನಮ್ಮ ಅಭ್ಯರ್ಥಿಗಳ ಗೆಲುವಿನ ಅಂತರ ಇನ್ನಷ್ಟು ಹೆಚ್ಚಾಗಲಿದೆ ಎಂದರು.