ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಪ್ರಧಾನಿ ಹುನ್ನಾರ

2 ckm 6 h.h.devaraj
ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್ ಮಾತನಾಡಿದರು.
Published on

ಚಿಕ್ಕಮಗಳೂರು: ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಪಾಲರಿಗೆ ನಿರ್ದೇಶನ ನೀಡಿ ನೋಟೀಸ್ ನೀಡುವ ಸಂಚು ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್ ಆರೋಪಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲ ವರ್ಗದ ನಾಯಕರಾಗಿ ರಾಜ್ಯದಲ್ಲಿ ಐದು ವರ್ಷಗಳ ಕಾಲ ಸುಭದ್ರ ಸರ್ಕಾರ ನಡೆಸಬೇಕೆಂಬ ಉz್ದೆÃಶದಿಂದ ೧೩೬ ಸ್ಥಾನಗಳನ್ನು ನೀಡುವ ಮೂಲಕ ಜನಾದೇಶ ನೀಡಿದ್ದಾರೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಪಾಲರನ್ನು ಬಳಿಸಿಕೊಂಡು ರಾಜ್ಯಸರ್ಕಾರವನ್ನು ಉರುಳಿಸುವ ಷಡ್ಯಂತ್ರ ನಡೆಸಿದ್ದಾರೆ ಎಂದು ಟೀಕಿಸಿದರು.
ರಾಜ್ಯಪಾಲರು ನೋಟೀಸ್ ನೀಡಿರುವುದು ಕಾನೂನು ಬಾಹಿರವಾಗಿದೆ. ಅದಕ್ಕಾಗಿ ರಾಜ್ಯಪಾಲರು ಮುಖ್ಯಮಂತ್ರಿ ಅವರ ಕ್ಷಮೆ ಕೇಳುವ ಜೊತೆಗೆ ನೋಟೀಸ್ ಹಿಂಪಡೆಯಬೇಕು. ರಾಜ್ಯಾಂಗದ ಮುಖ್ಯಸ್ಥರಾದ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಏಜೆಂಟರAತೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.
ರಾಜ್ಯದಲ್ಲಿ ಎಲ್ಲ ಜನರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ತರುವ ಮೂಲಕ ಒಳ್ಳೆಯ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡೀ ರಾಜ್ಯದ ಬೆಂಬಲವಿದೆ. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಪಕ್ಷದ ಎಲ್ಲಾ ಘಟಕಗಳು ಬೆಂಬಲಿಸಲಿವೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ದೃತಿಗೆಡಬಾರದು ಎಂದು ಹೇಳಿದರು.
ಈ ರಾಜ್ಯ ಹಾಗೂ ಪಕ್ಕದ ರಾಜ್ಯ ಸೇರಿದಂತೆ ಪ್ರವಾಹದಲ್ಲಿ ಮುಳುಗಿರುವ ಜನರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಎಲ್ಲಾ ಸಚಿವರು, ಶಾಸಕರು ಅತಿವೃಷ್ಟಿ ಹಾನಿ ಸಂತ್ರಸ್ಥರಿಗೆ ಸ್ಪಂದಿಸುತ್ತಿದ್ದಾರೆ. ಈಗಾಗಲೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿನೀಡಲಾಗುತ್ತಿದೆ. ಈ ಜಿಲ್ಲೆಯಲ್ಲಿಯೂ ಸಹ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ಸಂತ್ರಸ್ಥರನ್ನು ಭೇಟಿಮಾಡಿ ಸಾಂತ್ವಾನ ಹೇಳುತ್ತ ಸ್ಪಂದಿಸುತ್ತಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದಿಸುವುದಾಗಿ ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾಹುಲಿಯಪ್ಪಗೌಡ ಮಾತನಾಡಿ, ದೇಶದಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ಪರಿಹಾರ ಕ್ರಮ ಕೈಗೊಳ್ಳುವ ಬದಲು ಬಿಜೆಪಿ ರಾಜಕೀಯ ಆರೋಪ ಮಾಡುತ್ತಿರುವುದು ಸರಿಯಲ್ಲ. ರಾಜ್ಯದ ದಿಟ್ಟ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ವಕ್ತಾರ ರವೀಶ್ ಬಸಪ್ಪ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಡಿ.ಸಿ.ಪುಟ್ಟೇಗೌಡ, ಸಂತೋಷ್ ಲಕ್ಯಾ, ಸಿ.ಎನ್.ಅಕ್ಮಲ್, ಸಣ್ಣಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net