ಮೋದಿ ಭೇಟಿ ಹಿನ್ನೆಲೆ ನಾಳೆ ತುಮಕೂರಲ್ಲಿ ಸಂಚಾರ ವ್ಯತ್ಯಯ?

modi
Published on

ತುಮಕೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ಪ್ರಧಾನಿ ನರೇಂದ್ರ ಮೋದಿ ಕಲ್ಪತರುನಾಡಲ್ಲಿ ಮೇ 5 ರಂದು ಸಂಚಲನ ಸೃಷ್ಟಿಸಲಿದ್ದಾರೆ. ತುಮಕೂರು ಹಾಗೂ ನೆಲಮಂಗಲ ಕ್ಷೇತ್ರದ ಪರ ಬೃಹತ್ ಬಹಿರಂಗ ಸಮಾವೇಶದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ನಾಳಿನ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದ್ದು ತುಮಕೂರಿಗರು ಆದಷ್ಟು ಬಿ.ಎಚ್.ರಸ್ತೆ ಬದಲು ಪರ್ಯಾಯ ಮಾರ್ಗಗಳನ್ನು ಅವಲಂಬಿಸುವುದು ಸೂಕ್ತ.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಂಜೆ 4.30ಕ್ಕೆ ಮೋದಿ ರಾಜ್ಯ ಬಿಜೆಪಿ ಘಟಕ ಆಯೋಜಿಸಿರುವ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ ಲಕ್ಷಾಂತದ ಜನ ಸೇರುವ ನಿರೀಕ್ಷೆ ಇದ್ದು ಮೋದಿ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾ ಘಟಕವು ಸಮರೋಪಾದಿಯಲ್ಲಿ ಶ್ರಮಿಸುತ್ತಿದೆ.

ತುಮಕೂರು ಜಿಲ್ಲೆಯ 11 ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಎಲ್ಲಾ 12 ಕ್ಷೇತ್ರಗಳಿಂದ ಕಾರ್ಯಕರ್ತರು, ಸಾರ್ವಜನಿಕರು ಮೋದಿ ಸಭೆಯಲ್ಲಿ ಭಾಗವಹಿಸಲು ಆಗಮಿಸಲಿದ್ದು ನಗರದ ಹೊರಭಾಗದಲ್ಲಿ ಬಸ್‌ಗಳ ನಿಲುಗಡೆ ಸ್ಥಳ ಗುರುತಿಸಲಾಗಿದೆ. ಲಕ್ಷಾಂತರ ಮಂದಿ ಮೋದಿ ಕಾರ್ಯಕ್ರಮ ಸಾಕ್ಷಿಕರೀಸುವ ನಿರೀಕ್ಷೆ ಇದ್ದು ಶುಕ್ರವಾರ ಮಧ್ಯಾಹ್ನದಿಂದಲೇ ನಗರದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net