ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಿ

ಹೊಸಪೇಟೆ ಡಿಎಚ್‌ಒ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅತಿಸಾರ ಭೇದಿ ನಿಯಂತ್ರಣ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಮಾತನಾಡಿದರು. ಡಿಎಚ್‌ಒ ಡಾ.ಎಲ್.ಆರ್.ಶಂಕರ್ ಇದ್ದರು.
ಹೊಸಪೇಟೆ ಡಿಎಚ್‌ಒ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅತಿಸಾರ ಭೇದಿ ನಿಯಂತ್ರಣ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಮಾತನಾಡಿದರು. ಡಿಎಚ್‌ಒ ಡಾ.ಎಲ್.ಆರ್.ಶಂಕರ್ ಇದ್ದರು.
Published on

ಹೊಸಪೇಟೆ: ಶಾಲೆಯಲ್ಲಿ ನೀಡುವ ಬಿಸಿಯೂಟ ಶುಚಿ, ರುಚಿ, ಸ್ವಾಸ್ಥ ್ಯ ಜತೆ ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯ ವಿಠಲ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅತಿಸಾರ ಭೇದಿ ನಿಯಂತ್ರಣ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ತೀವ್ರ ಅತಿಸಾರದಿಂದ ಮರಣ ಹೊಂದುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಬೇಕು. ಅತಿಸಾರ ಭೇದಿ ನಿಯಂತ್ರಣದ ಕ್ರಮಗಳನ್ನು ಪಾಲಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯಿಂದ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ ಎಂದರು.

ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಮಾತನಾಡಿ, ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯ ಯೋಜನೆ ರಾಜ್ಯದಲ್ಲಿ ಜಾರಿಗೊಳಿಸಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ಜು.1ರಿಂದ ರಕ್ತಹೀನತೆ ತಪಾಸಣೆ ಆರಂಭವಾಗಿದ್ದು, ಜು.31ರವರೆಗೆ ನಡೆಯಲಿದೆ. ಆರ್‌ಬಿಎಸ್‌ಕೆ ತಂಡ ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡಿದಾಗ ಶೇ.100 ಹಾಜರಾತಿ ಇರುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಗೌಡ, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಸತೀಶ್‌ಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net