ಸ್ವಚ್ಛತೆಗೆ ಆದ್ಯತೆ ನೀಡಿ

JLY., 17, HNP., PH.1
Published on

ಹೊಳೆನರಸೀಪುರ: ಮಳೆ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಾಂಕ್ರಾಮಿಕ ರೋಗಗಳು ಹರಡಲಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕಚೇರಿಯ ಮೇಲ್ವಿಚಾರಕ ಕೆ.ವಿನಯ್ ಹೇಳಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಪೂಜೆಕೊಪ್ಪಲು ಗ್ರಾಮದಲ್ಲಿ ಗುರುವಾರ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಸ್ವಚ್ಛತೆಗೆ ಆದ್ಯತೆ ನೀಡಿದಾಗ ಮಾತ್ರ ರೋಗಗಳನ್ನು ತಡೆಗಟ್ಟಲು ಸಾಧ್ಯ. ಅಲ್ಲದೆ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರ ಹಾಗೂ ಆರೋಗ್ಯ ಇಲಾಖೆ ನೀಡುತ್ತಿರುವ ಸಲಹೆಯನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕ ಅನಂತರಾಮು, ಹಳೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ಆರ್.ಬಿ.ಪುಟ್ಟೆಗೌಡ, ಕಿರಿಯ ಆರೋಗ್ಯ ಸಹಾಯಕ ಜೆ.ಟಿ.ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net