

ಅರಕಲಗೂಡು: ಪರಿಸರವನ್ನು ಶುಚಿಯಾಗಿಡಲು ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಕೆ. ನಾಗೇಶ್ ಮೂರ್ತಿ ಹೇಳಿದರು.
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾವು ವಾಸಿಸುವ ಮನೆ ಮಾತ್ರವಲ್ಲದೆ ಕೆಲಸ ಮಾಡುವ ಸ್ಥಳ ಸುತ್ತಲಿನ ಪ್ರದೇಶದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಮರ ಗಿಡಗಳನ್ನು ಬೆಳೆಸುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬಹುದು ಎಂದರು.
ಸಿವಿಲ್ ನ್ಯಾಯಾಧೀಶ ಎಂ. ರಘು, ಪಪಂ ಮುಖ್ಯಾಧಿಕಾರಿ ಬಸವರಾಜು, ವಕೀಲರ ಸಂಘದ ವಿಜಯಕುಮಾರ್, ರವಿಚಂದ್ರ, ಶಂಕರಯ್ಯ, ನಾಗರಾಜು ಹಾಗೂ ವಕೀಲರು ಇದ್ದರು. ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.