

ಯಗಟಿಪುರ: ಜಿಲ್ಲೆಯಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಯಗಟಿಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಅಕ್ಷಿತ್ ಹೇಳಿದರು.
ಯಗಟಿಪುರದಲ್ಲಿ ಪುರ ಗ್ರಾಪಂ ಸಹಯೋಗದಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಸಭಾ ಭವನದಲ್ಲಿ ಆಯೋಜಿಸಿದ್ದ ಡೆಂೆ, ಮಲೇರಿಯಾ ತಡೆ ಹಾಗೂ ಸ್ವಚ್ಛತೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಂತ ನೀರು ಹಾಗೂ ಸ್ವಚ್ಛತೆ ಇಲ್ಲದ ಪ್ರದೇಶಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂೆ ಹರಡಲು ಪ್ರಮುಖ ಕಾರಣವಾಗಿದೆ. ಆದ್ದರಿಂದ ಗ್ರಾಮಸ್ಥರು ತಮ್ಮ ಮನೆ ಸುತ್ತಾಮುತ್ತಾ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಸ್ವಚ್ಛತೆ ಕಾಪಾಡಬೇಕು ಎಂದು ಸಲಹೆ ನೀಡಿದರು.
ಪುರ ಗ್ರಾಪಂ ಸದಸ್ಯ ಮನುಕುಮಾರ್ ಮಾತನಾಡಿ, ಪುರ ಗ್ರಾಪಂ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ ಡೆಂೆ ಹರಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಈ ಕುರಿತು ಗ್ರಾಪಂ ವ್ಯಾಪ್ತಿಯ ಹೋಟೆಲ್,ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ. ಸಾರ್ವಜನಿಕರು ಕೂಡ ಗ್ರಾಪಂ ಜತೆ ಕೈಜೋಡಿಸಿ ಡೆಂೆ ನಿರ್ಮೂಲನೆಗೆ ಸಹಕರಿಸಬೇಕು ಎಂದರು.
ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಸಮಿತಿ ಟ್ರಸ್ಟ್‌ನ ಸದಸ್ಯ ಶಿವಕುಮಾರ್ ಮಾತನಾಡಿ, ಸ್ವಚ್ಛತೆ ಇರುವ ಕಡೆ ಆರೋಗ್ಯ ಇರುತ್ತದೆ. ಆದ್ದರಿಂದ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಸುಮಾ ಮೋಹನ್, ಟ್ರಸ್ಟ್‌ನ ಕಾರ್ಯದರ್ಶಿ ಯಗಟಿಪುರ ಪ್ರಸನ್ನ, ಲಕ್ಷಣ, ಮುತ್ತಪ್ಪ, ಆಶಾ ಕಾರ್ಯಕರ್ತೆ ಲೀಲಾವತಿ, ಮುಖ್ಯಶಿಕ್ಷಕಿ ಗಂಗಾಧರ, ನರಸಿಂಹ ಮೂರ್ತಿ, ಅಶೋಕ ಇದ್ದರು.