ಸಮಯ ವ್ಯರ್ಥ ಮಾಡದೆ ಕಲಿಕೆಗೆ ಆದ್ಯತೆ ನೀಡಿ

2 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿಗಳು ಕಾಲೇಜು ಶಿಕ್ಷಣದ ಜತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಗಳ ಪರಿಕಲ್ಪನೆ ಹಾಗೂ ಅದಕ್ಕೆ ಪೂರಕವಾದ ಪುಸ್ತಕಗಳ ಸಂಗ್ರಹ, ಅಧ್ಯಯನಶೀಲತೆ ನಿರಂತರವಾಗಿರಬೇಕು. ವಿದ್ಯಾರ್ಥಿ ಜೀವನ ಅತೀ ಅಮೂಲ್ಯವಾದದ್ದು. ಆಧುನಿಕತೆ ಹಿಂದೆ ಬಿದ್ದು ಸಮಯ ವ್ಯರ್ಥಮಾಡದೆ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.
ನಗರದ ಜೆಎಸ್​ಎಸ್​ನ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ದೀಕ್ಷಾ ಬೋಧ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಂಥಾಲಯದ ಸದುಪಯೋಗ ಪಡೆದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದು, ಪ್ರತಿಭಾನ್ವಿತರಾಗಿ ಹೊರಹೊಮ್ಮಲು ಸಹಕಾರ ನೀಡಲಾಗುವುದು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಬೇಕು ಎಂದರು.
ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಆರ್​.ವಿ. ಚಿಟಗುಪ್ಪಿ, ಪ್ರೊ. ಶ್ರೀಕಾಂತ ರಾಗಿಕಲ್ಲಾಪುರ, ಪ್ರೊ. ವಿವೇಕ ಲಕ್ಷ್ಮೇಶ್ವರ, ಪ್ರೊ. ಎನ್​.ಜಿ. ಪುಡಕಲಕಟ್ಟಿ, ಅಧ್ಯಾಪಕರು, ಪಾಲಕರು, ಇತರರು ಇದ್ದರು.
ಡಾ. ಸೂರಜ್​ ಜೈನ್​ ಸ್ವಾಗತಿಸಿದರು. ಪ್ರೊ. ಮಹಾಂತ ದೇಸಾಯಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net