ಪಕ್ಷ ಬಲವರ್ಧನೆಗೆ ಆದ್ಯತೆ ನೀಡಿ

13adarshkdga1
Published on

ಮಡಿಕೇರಿ: ಚುನಾವಣೆ ಸಂದರ್ಭದಲ್ಲಿ ಸಕ್ರಿಯರಾಗದೆ ನಿತ್ಯ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ರಫೀಕ್ ಅಹಮ್ಮದ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಕ್ತಿ ಕಾರ್ಯಕ್ರಮ ಮತ್ತು ಎಲ್‌ಡಿಎಂಎಂಸಿ ಸಭೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಶಕ್ತಿ ಕಾರ್ಯಕ್ರಮ’ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕನಸಿನ ಕಾರ್ಯಕ್ರಮವಾಗಿದ್ದು, ಕೊಡಗಿನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸುವಂತೆ ಮನವಿ ಮಾಡಿದರು.

ದೇಶದಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ನಾವೆಲ್ಲರೂ ಭಾರತೀಯರು ಎಂಬ ಹೆಮ್ಮೆಯಿಂದ ಜಾತ್ಯತೀತ ಮನೋಭಾವದೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಬೇಕು. ಆ ಮೂಲಕ ಪ್ರತಿಯೊಬ್ಬ ಕಾರ್ಯಕರ್ತ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಮೈಸೂರು ವಿಭಾಗದ ಕಾಂಗ್ರೆಸ್ ಸಂಯೋಜಕ ಸಫೀಯುಲ್ಲ, ಅಲ್ಪಸಂಖ್ಯಾತರ ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಕುರಂಬಾಯಿ, ರಾಜ್ಯ ಉಪಾಧ್ಯಕ್ಷ ಎ.ಕೆ.ಹ್ಯಾರಿಸ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಕಾರ್ಯದರ್ಶಿ ಕೆ.ಎಂ.ಬಾವ, ಜಿಲ್ಲಾ ವಕ್ತಾರ ಟಿ.ಈ.ಸುರೇಶ್, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕುಶಾಲನಗರ ಬ್ಲಾಕ್ ಅಧ್ಯಕ್ಷ ಅನಂತಕುಮಾರ್, ಪ್ರಮುಖರಾದ ರಫೀಕ್ ಅಹಮ್ಮದ್, ಶಾಹೀದ್, ರಜಾಕ್, ಮಹಮ್ಮದ್ ಕಡಂಗ, ಫೈಝನ್, ಖೈರುನ್ನಿಸ, ಅಮೀನ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net