ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ

25MDG1
Published on

ಮೂಡಿಗೆರೆ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು ಎಂದು ಜಾವಳಿ ಗ್ರಾಪಂ ಅಧ್ಯಕ್ಷ ಪ್ರದೀಪ್ ಹೇಳಿದರು.

ಜಾವಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆ ಮತ್ತು ಕಾಲೇಜುಗಳು ಆಧುನಿಕ ಕಾಲಕ್ಕೆ ತಕ್ಕಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿವೆ. ಶಾಲೆ ಶಿಕ್ಷಕರು, ಉಪನ್ಯಾಸಕರು ಮತ್ತು ಪಾಲಕರು ಅಂಕಗಳಿಕೆಯ ಬಗ್ಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ಉತ್ತಮ ಶಿಕ್ಷಣ ದೊರಕಿದರೆ ಅಂಕಗಳು ತಾನಾಗಿ ಹುಡುಕಿಕೊಂಡು ಬರುತ್ತದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಆರ್.ನವೀನ್ ಮಾತನಾಡಿ, ಈಗ ಪ್ರತಿಯೊಬ್ಬರಿಗೂ ಕಡ್ಡಾಯ ಶಿಕ್ಷಣ ನೀತಿ ಜಾರಿಯಾಗಿದೆ. ಅಕ್ಷರ ಕಲಿಯದಿರುವವರಿಗೆ ಸಮಾಜದಲ್ಲಿ ಗೌರವ ಸಿಗಲಾರದು. ಶಿಕ್ಷಣ ಪಡೆದವರಿಗೆ ಮಾತ್ರ ಸಮಾಜದಲ್ಲಿ ಗೌರವ ದೊರಕುವ ಜತೆಗೆ ಉದ್ಯೋಗ ಕೂಡ ಹುಡುಕಿಕೊಂಡು ಬರುತ್ತದೆ ಎಂದು ತಿಳಿಸಿದರು.

ಶಾಲೆ ಆವರಣದಲ್ಲಿ ಸರಸ್ವತಿ ನಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಬಾಳೂರು ಗ್ರಾಪಂ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುಟ್ಟರಾಜ್, ಉಪಾಧ್ಯಕ್ಷ ಮಂಜಪ್ಪ, ಜಾವಳಿ ಗ್ರಾಪಂ ಉಪಾಧ್ಯಕ್ಷ ಮನೋಹರ್, ಸದಸ್ಯೆ ನಂದಿನಿ, ಮುಖಂಡರಾದ ಮನೋಜ್, ಚೆನ್ನಕೇಶವ ಗೌಡ, ಪರೀಕ್ಷಿತ್ ಜಾವಳಿ, ಚಂದ್ರಶೇಖರ್, ಸುನಿಲ್, ಸಂದೀಪ್, ನಿವೃತ್ತ ಶಿಕ್ಷಕ ಚಂದ್ರಯ್ಯ, ಮುಖ್ಯ ಶಿಕ್ಷಕ ದಿನೇಶ್, ಶಿಕ್ಷಕರಾದ ಆದಿತ್ಯ, ಆಶಾ, ತೇಜಸ್ವಿನಿ, ಎಸ್‌ಡಿಎಂಸಿ ಸದಸ್ಯರಾದ ಕೃಷ್ಣ, ರೇಖಾ, ಅಮ್ಮು, ಶೇಖರ, ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net