ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

23 RON 1
Published on

ರೋಣ: ಅನುದಾನ ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳುವುದರ ಜತೆಗೆ ನಿಗದಿತ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.

ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸರ್ಕಾರಿ ಶಾಲೆಗಳು ಉನ್ನತ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಶ್ರಮಿಸುತ್ತಿದೆ ಎಂದರು.

ಪುಂಡಲೀಕ ವಾಲ್ಮೀಕಿ, ಸಂಗಪ್ಪ ಮಾಳವಾಡ. ಮುದುಕಪ್ಪ ಮೇಟಿ, ಮಲ್ಲಿಕಾರ್ಜುನ, ಮಂಜುನಾಥ ಮೇಟಿ, ಗುತ್ತಿಗೆದಾರ ಮಹೇಶ ದಡೇಸೂರಮಠ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಕಾಂತ ನಿರ್ಲೆಕರ್, ವಿಜಯಗೌಡ ಗೌಡರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net