ಕ್ರೀಡಾಂಗಣ ಸ್ವಚ್ಛತೆಗೆ ಆದ್ಯತೆ ನೀಡಿ

Prioritize stadium cleanliness
ವಿಜಯಪುರದ ಡಾ. ಬಿ.ಆರ್​. ಅಂಬೇಡ್ಕರ್​ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿ.ಬಿ. ಚಿಕ್ಕಲಗಿ, ಗೋಪಿನಾಥ ಮಲಜಿ ಮತ್ತಿತರರಿದ್ದಾರೆ.
Published on

ವಿಜಯಪುರ:  ನಗರದ ಡಾ. ಬಿ.ಆರ್​. ಅಂಬೇಡ್ಕರ್​ ಕ್ರೀಡಾಂಗಣ, ಕಂದಗಲ್​ ಹನುಮಂತರಾಯ ರಂಗಮಂದಿರ ಹಾಗೂ ಜಿ.ಪಂ. ಬಳಿಯ ಈಜುಕೊಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಶುಕ್ರವಾರ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.\

ಡಾ. ಬಿ.ಆರ್​. ಅಂಬೇಡ್ಕರ್​ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು, ಮಳೆ ನೀರು ಕ್ರೀಡಾಂಗಣದಲ್ಲಿ ನಿಲ್ಲದಂತೆ ನೋಡಿಕೊಂಡು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕ್ರೀಡಾಂಗಣ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗಳನ್ನು ನೇಮಿಸಲು ಕ್ರಮವಹಿಸಬೇಕು. ಅಲ್ಲದೆ, ಕ್ರೀಡಾಂಗಣದ ಆವರಣದಲ್ಲಿರುವ ಅಂಗಡಿಗಳ ಬಾಡಿಗೆ ದರ ಪರಿಷ್ಕರಣೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಂತರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ರಂಗಮಂದಿರದ ನವೀಕರಣಕ್ಕಾಗಿ ಕಾಮಗಾರಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ರಂಗಮಂದಿರವನ್ನು ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಪೇಂಟಿಂಗ್​, ಗೋಡೆ ಚಿತ್ರ ಬರೆಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಜತೆಗೆ ಆವರಣದಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಬಳಿಕ ಜಿ.ಪಂ. ಬಳಿಯ ಈಜುಕೊಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ&ಸೂಚನೆಗಳನ್ನು ನೀಡಿದರು.

ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ. ಚಿಕ್ಕಲಗಿ, ನಿರ್ಮಿತಿ ಕೇಂದ್ರದ ಗೋಪಿನಾಥ ಮಲಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net