ಸರ್ವಾಂಗೀಣ ಶಿಕ್ಷಣಕ್ಕೆ ಆದ್ಯತೆ

Priority for all-round education
ವಿವೇಕ ಯೋಜನೆಯಡಿಯಲ್ಲಿ ನಿರ್ಮಿಸಲಾದ ರಬಕವಿ ಜಿಎಚ್‌ಪಿಎಸ್ ವಿದ್ಯಾನಗರ ಶಾಲೆಯ ಕೊಠಡಿಯನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು. ಎ.ಕೆ. ಬಸಣ್ಣವರ, ವಿದ್ಯಾ ದಬಾಡಿ, ದೀಪಾ ಗಾಡಿವಡ್ಡರ, ವೆಂಕನಗೌಡ ಪಾಟೀಲ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ ಮತ್ತಿತರರಿದ್ದರು.
Published on

ರಬಕವಿ/ಬನಹಟ್ಟಿ: ಸರ್ಕಾರಿ ಶಾಲೆಗಳು ಯಾವ ಖಾಸಗಿ ಶಾಲೆಗಳಿಗೂ ಕಮ್ಮಿ ಇಲ್ಲದಂತೆ ಶಿಕ್ಷಣ ನೀಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ವಿವೇಕ ಯೋಜನೆಯಡಿಯಲ್ಲಿ ನಿರ್ಮಿಸಲಾದ ರಬಕವಿ ಜಿಎಚ್‌ಪಿಎಸ್ ವಿದ್ಯಾನಗರ ಶಾಲೆಯ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು. ಸರ್ವಾಂಗೀಣ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ಜಮಖಂಡಿ ಬಿಇಒ ಎ.ಕೆ. ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಬೆಳಗಲಿ, ನಗರಸಭೆ ಅಧ್ಯಕ್ಷೆ ವಿದ್ಯಾ ದಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೆಂಕನಗೌಡ ಪಾಟೀಲ, ನಗರಸಭೆ ಸದಸ್ಯರಾದ ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ನೌಕರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ, ಮಲ್ಲಿಕಾರ್ಜುನ ಗಡೆಣ್ಣವರ, ಜೆ. ಆರ್. ನಾವಿ, ಆರ್. ಎಸ್. ಝಳಕಿ, ಸವಿತಾ ಹೊಸೂರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net