

ಸಿಂಧನೂರು: ಈ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಕೆಕೆಆರ್‌ಡಿಬಿ ಅನುದಾನದಿಂದ ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಇದನ್ನೂ ಓದಿ:ಸಿ.ಸಿ. ಟಿ.ವಿ, ಮನೆ ಉದ್ಘಾಟನಾ ಕಾರ್ಯಕ್ರಮ
ತಾಲೂಕಿನ ಮಲ್ಲದಗುಡ್ಡ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಕೆಆರ್‌ಡಿಬಿ ಯೋಜನೆಯಡಿ 39.85 ಲಕ್ಷ ರೂ. ವೆಚ್ಚದ ಎರಡು ಹೆಚ್ಚುವರಿ ಕೊಠಡಿ ನಿರ್ಮಿಸಲಾಗಿದೆ. ಈ ಹಿಂದೆ ಕ್ಷೇತ್ರದ ಶಾಲೆಗಳಿಗೆ ಅಗತ್ಯ ಸೌಲಭ್ಯಗಳ ಪಟ್ಟಿ ಮಾಡಲಾಗಿತ್ತು. ಅವಧಿಯೊಳಗೆ ಗುಣಮಟ್ಟದ ಕಟ್ಟಡ ನಿರ್ಮಿಸಿ ಕೊಠಡಿಗಳ ಸಮಸ್ಯೆ ಪರಿಹರಿಸಲಾಗಿದೆ ಎಂದರು.
ಕೆಪಿಸಿಸಿ ಸದಸ್ಯ ನಲ್ಲಾ ವೆಂಕಟೇಶ್ವರ, ಗ್ರಾಪಂ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷೆ ಲಕ್ಷ್ಮೀ ಬುಡ್ಡಪ್ಪ, ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ ಶೆಟ್ಟಿ, ಪ್ರಮುಖರಾದ ಚಂದ್ರಶೇಖರ, ಪಂಪಣ್ಣ, ದುರುಗಪ್ಪ ರೌಡಕುಂದ, ರವಿಗೌಡ ಮಲ್ಲದಗುಡ್ಡ, ಪ್ರವೀಣಕುಮಾರ ಇತರರಿದ್ದರು.