ಉತ್ತಮ ಶಿಕ್ಷಣವೇ ನಿಜವಾದ ಸಂಪತ್ತು

ಸಿಂಧನೂರು ತಾಲೂಕಿನ ತುರ್ವಿಹಾಳದಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಹಾಯಕ ಸರ್ಕಾರಿ ಅಭಿಯೋಜಕ ಹನುಮೇಶ ರಾಗಲಪರ್ವಿ ಉದ್ಘಾಟಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆಯ ಪ್ರಭುರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕ ದುರ್ಗಪ್ಪ ಇತರರಿದ್ದರು.

Published on

ಸಿಂಧನೂರು: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉನ್ನತ ಹುದ್ದೆ ಅಲಂಕರಿಸುವಂತೆ ಪಾಲಕರು ಕಾಳಜಿ ವಹಿಸಬೇಕು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಹನುಮೇಶ ರಾಗಲಪರ್ವಿ ಹೇಳಿದರು.

ತುರ್ವಿಹಾಳದ ಡಾ.ಅಂಬೇಡ್ಕರ್ ಭವನದಲ್ಲಿ ಎಸ್ಸಿಪಿ, ಟಿಎಸ್ಪಿ ಉಪಯೋಜನೆಯಡಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು. ಆಧುನಿಕ ಯುಗದಲ್ಲಿ ಶಿಕ್ಷಣ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಸರಿಯಾದ ಶಿಕ್ಷಣ ಪಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಉತ್ತಮ ಶಿಕ್ಷಣವೇ ನಿಜವಾದ ಸಂಪತ್ತು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಎಂದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಮಾತನಾಡಿದರು. ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆಯ ಪ್ರಭುರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕ ದುರ್ಗಪ್ಪ, ತುರ್ವಿಹಾಳ ಠಾಣೆ ಎಎಸ್‌ಐ ಬಸಯ್ಯ, ವಕೀಲ ವೀರಭದ್ರಗೌಡ ಸಾಲಗುಂದ, ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಸಂಘದ ಅನ್ವರ ಪಾಷಾ, ಕಾರ್ಮಿಕ ಇಲಾಖೆ ಸಿಬ್ಬಂದಿ ಜೋಕಿಮ್, ಅಕೌಂಟೆಂಟ್ ಹುಸೇನ್ ನಾಯ್ಕ, ಮಾರ್ಗದರ್ಶಿ ಸಂಸ್ಥೆಯ ಹನುಮಂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net