ಮನೆ ಮನೆಗೆ ನೀರು ಪೂರೈಕೆಗೆ ಆದ್ಯತೆ

Priority for door to door water supply
ಶಾಸಕ ಭೀಮಸೇನ ಚಿಮ್ಮನಕಟ್ಟಿ
Published on

ಬಾದಾಮಿ: ಸರ್ಕಾರ ಜಾರಿಗೆ ತಂದಿರುವ ಮಹಾತ್ವಾಂಕಾಕ್ಷೆ ಯೋಜನೆಗಳಲ್ಲಿ ಜಲಜೀವನ ಮಿಷನ್ ಒಂದಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ತಾಲೂಕಿನ ಮಂಗಳಗುಡ್ಡ ಗ್ರಾಮದಲ್ಲಿ ಕುಡಿಯುವ ನೀರು ಸಂಪರ್ಕ ಒದಗಿಸುವ ಪೈಪ್‌ಲೈನ್ ಕಾರ್ಯಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಲಜೀವನ ಮಿಷನ್ ಯೋಜನೆ ಹಂತ-3ರ ಅಡಿಯಲ್ಲಿ 2022-23 ನೇ ಸಾಲಿಗೆ ಮಂಜೂರಾದ 144 ಲಕ್ಷ ರೂ. ಅನುದಾನದಲ್ಲಿ ತಾಲೂಕಿನ ಮಂಗಳಗುಡ್ಡ ಗ್ರಾಮದ 536 ಮನೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ನಲ್ಲಿ ಮೂಲಕ ನೀರು ಪೂರೈಸುವ ಗುರಿ ಹೊಂದಲಾಗಿದೆ ಎಂದರು. ಇದೇ ವೇಳೆ ಶಾಸಕರನ್ನು ಸನ್ಮಾನಿಸಲಾಯಿತು. ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net