

ಲಿಂಗದಹಳ್ಳಿ: ನಂದಿಬಟ್ಟಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಎಲ್ಲ ಗ್ರಾಮಗಳಿಗೂ ಸಮರ್ಪಕ ಕುಡಿಯುವ ನೀರು, ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ನಂದಿಬಟ್ಟಲು ಗ್ರಾಪಂ ಅಧ್ಯಕ್ಷ ಎನ್.ಜಿ. ಭದ್ರೇಗೌಡ ಹೇಳಿದರು.
ಸೈದುಖಾನ್ ಗ್ರಾಮದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿಯನ್ನು ನರೇಗಾ ಯೋಜನೆ ಮೂಲಕ ಮಾಡಲು ತೀರ್ಮಾನಿಸಲಾಗಿದೆ. ಗ್ರಾಮಸ್ಥರು ನರೇಗಾ ಕಾಮಗಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಹೆಸರನ್ನು ನೊಂದಾಯಿಸಿ ಕೊಳ್ಳುವ ಮೂಲಕ ಪ್ರತಿ ಕುಟುಂಬವು ವಾರ್ಷಿಕ 100 ಮಾನವ ದಿನಗಳಷ್ಟು ಕೂಲಿ ಕೆಲಸ ಮಾಡಬಹುದಾಗಿದೆ ಎಂದು ತಿಳಿಸಿದರು.
ನಂದಿಬಟ್ಟಲು ಗ್ರಾಪಂ ಪಿಡಿಒ ಎನ್.ಎಸ್.ನಾಗರಾಜಪ್ಪ, ಸದಸ್ಯೆ ಲತಾಮಣಿ, ನಿವೃತ್ತ ಯೋಧ ಸುಬ್ರಹ್ಮಣಿ, ಸುಬ್ಬಯ್ಯ ಚಂದ್ರಪ್ಪ, ಗ್ರಾಪಂ ಸಿಬ್ಬಂದಿಗಳಾದ ಆರ್.ರಾಜೇಶ್, ಎನ್.ರವಿ ಇದ್ದರು.