

ಸಿದ್ದಾಪುರ: ಸಿದ್ದಾಪುರ ಸುತ್ತಮುತ್ತಲಿನ ಭಾಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮುಖ ಎಜುಕೇಶನಲ್ ಟ್ರಸ್ಟ್ ಜ್ಞಾನಸರಸ್ವತಿ ಪಿಯು ಕಾಲೇಜ್ ನೂತನವಾಗಿ ಆರಂಭಗೊಂಡಿರುವುದು ಪ್ರಶಂಸನೀಯ, ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಸಂಸ್ಕಾರ, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ, ಶ್ರೇಷ್ಠ ಫಲಿತಾಂಶದ ಗುರಿ ಹೊಂದಿರುವುದು ಉತ್ತಮ ಬೆಳವಣೆಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಸಿದ್ದಾಪುರ ಕಡ್ರಿಯಲ್ಲಿ ನೂತನವಾಗಿ ಆರಂಭಗೊಂಡಿರುವ ಸುಮುಖ ಎಜುಕೇಶನ್ ಟ್ರಸ್ಟ್ ಜ್ಞಾನಸರಸ್ವತಿ ಪಿಯು ಕಾಲೇಜ್ ಶ್ರೀಕಾರ್‌ವನ್ನು ಉದ್ಘಾಟಿಸಿ ಭಾನುವಾರ ಮಾತನಾಡಿದರು.
ಸಿದ್ದಾಪುರ ಸುಮುಖ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಹಾಗೂ ಜ್ಞಾನಸರಸ್ವತಿ ಪಿಯು ಕಾಲೇಜಿನ ಸಂಸ್ಥಾಪಕ ಬಿ.ಎಸ್.ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ಶ್ರೀಲತಾ ಶೆಟ್ಟಿ ಕಡ್ರಿ, ಸುಮುಖ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪಾಂಡುರಂಗ ಪಡಿಯಾರ್, ಟ್ರಸ್ಟಿ ಆದರ್ಶ ಶೆಟ್ಟಿ, ಸಿದ್ದಾಪುರ ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಡಿ.ಗೋಪಾಲಕೃಷ್ಣ ಕಾಮತ್, ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ, ಮುಖ್ಯಶಿಕ್ಷಕಿ ಶ್ವೇತಾ ಉಪಸ್ಥಿತರಿದ್ದರು.
ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಸಂಪನ್ಮೂಲನ ವ್ಯಕ್ತಿಯಾಗಿದ್ದರು. ಕಾಲೇಜಿನ ಆರಂಭಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು. ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿ, ಉಪನ್ಯಾಸಕರಾದ ಜಿ.ನಾಗರಾಜ ಮತ್ತು ಮಂಜುನಾಥ ಸಿ.ಪಿ.ನಿರೂಪಿಸಿದರು.
ವಿದ್ಯಾಸಂಸ್ಥೆ ನಡೆಸಬೇಕು ಎನ್ನುವ ಕನಸ್ಸು ಬಾಲ್ಯದಿಂದಲೂ ಇತ್ತು. ಈ ಕನಸಿಗೆ ಸಹಕಾರ ನೀಡಿರುವುದು ಸಿದ್ದಾಪುರ ಸರಸ್ವತಿ ವಿದ್ಯಾಲಯ. 25 ವರ್ಷಗಳನ್ನು ಪೂರೈಸಿರುವ ಸರಸ್ವತಿ ವಿದ್ಯಾಲಯದಲ್ಲಿ ಹೊಸ ಆಡಳಿತ ಮಂಡಳಿಯಿಂದ ಜ್ಞಾನಸರಸ್ವತಿ ಪಿಯು ಕಾಲೇಜು ಆರಂಭಗೊಂಡಿದೆ. ಸಾಮಾನ್ಯ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಭವಿಷ್ಯ ರೂಪಿಸುವುದು ಕಾಲೇಜಿನ ಉದ್ದೇಶವಾಗಿದೆ. ಸುಸಜ್ಜಿತ ಕಾಲೇಜು ಕಟ್ಟಡದ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಬಿ.ಎಸ್.ಸುರೇಶ್ ಶೆಟ್ಟಿ, ಜ್ಞಾನಸರಸ್ವತಿ ಪಿಯು ಕಾಲೇಜಿನ ಸಂಸ್ಥಾಪಕ