ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಆದ್ಯತೆ

13RAIBAG1
Published on

ರಾಯಬಾಗ: ಪಟ್ಟಣಕ್ಕೆ ಗ್ರಾಮೀಣ ಭಾಗದಿಂದ ವಿದ್ಯಾಭ್ಯಾಸ ಮಾಡಲು ಬರುವ ಪ್ರತಿಭಾವಂತ ಬಡ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಸುಸಜ್ಜಿತ ವಸತಿ ನಿಲಯ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದ ಬಿಇಒ ಕಚೇರಿ ಬಳಿ ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ವಸತಿ ಶಿಕ್ಷಣ ಸಂಸ್ಥೆಯಿಂದ ಮಂಜೂರಾದ 5 ಕೋಟಿ ರೂ. ಅನುದಾನದಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗ ಮಾಡಲು ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಸಚಿವ ಪ್ರಿಯಾಂಕ ಖರ್ಗೆ ಅವರು ಆರ್‌ಎಸ್‌ಎಸ್ ಬ್ಯಾನ್ ಕುರಿತ ಪತ್ರ ಬರೆದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಕಾಂಗ್ರೆಸ್ ಪಕ್ಷದ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಅವರಿಗೆ ಸಾಧ್ಯವಾಗಿಲ್ಲ ಅನ್ನುವುದನ್ನು ಖರ್ಗೆ ಅವರು ಮೊದಲು ತಿಳಿದುಕೊಳ್ಳಬೇಕೆಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಿಜೆಪಿ ಶಾಸಕ ಮುನಿರತ್ನ ಜತೆಗೆ ನಡೆದುಕೊಂಡಿರುವ ರೀತಿ ಕಾಂಗ್ರೆಸ್ ಸಂಸ್ಕೃತಿ ತಿಳಿಸುತ್ತದೆ ಎಂದು ಟೀಕಿಸಿದರು.

ಎಇಇ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್., ಸದಾಶಿವ ಘೋರ್ಪಡೆ, ಅಶೋಕ ಅಂಗಡಿ, ಸುರೇಶ ಮಾಳಿ, ಸದಾನಂದ ಹಳಿಂಗಳಿ, ರಿತೇಶ ಅವಳೆ, ಸುಭಾಷ ಕಾಂಬಳೆ, ಪ್ರೇಮ ಸಾನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net