ಮಹಿಳೆಯರ-ಮಕ್ಕಳ ಆರೋಗ್ಯಕ್ಕೆ ಆದ್ಯತೆ

NARAGUND
Published on

ನರಗುಂದ: ತಾಲೂಕಿನ ಜಗಾಪೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ’ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನ ಕಾರ್ಯಕ್ರಮವನ್ನು ಡಾ.ನಿಖಿಲ ಪಾಟೀಲ ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಹಿಳೆಯರ ಮತ್ತು ಮಕ್ಕಳ ಆರೋಗ್ಯವನ್ನು ಬಲಪಡಿಸುವ ಉದ್ದೇಶದಿಂದ ಆರಂಭಿಸಲಾದ ಈ ಅಭಿಯಾನವು ಅ. 2ರವರೆಗೆ ನಡೆಯಲಿದೆ. ಮಹಿಳೆಯರಿಗೆ ವೈದ್ಯಕೀಯ ತಪಾಸಣೆ, ಲಸಿಕೆ, ರಕ್ತಪರೀಕ್ಷೆಗಳು ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ. ತಾಲೂಕು ಮತ್ತು ಜಿಲ್ಲೆ ಹಾಗೂ ತಾಲೂಕು ಮಟ್ಟದ ಉಪ ಆರೋಗ್ಯ ಕೇಂದ್ರಗಳಲ್ಲಿಯೂ ಈ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪ್ರಧಾನಿ ಮೋದಿಜಿ ಅವರ ಜನ್ಮ ದಿನಾಚರಣೆಯಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಐ.ಆರ್. ಗಂಜಿ ಮಾತನಾಡಿ, ಮಹಿಳೆಯರ ಆರೋಗ್ಯ ತಪಾಸಣೆ ಮಾಡಿ ಸಂಕ್ರಾಮಿಕ ರೋಗವಾದ ಕ್ಷಯರೋಗಕ್ಕೆ ಚಿಕಿತ್ಸೆ ನೀಡಲಾಗುವುದು. ಅಸಾಂಕ್ರಾಮಿಕ ರೋಗಗಳಾದ ಬಿಪಿ, ಶುಗರ್, ಕ್ಯಾನ್ಸರ್, ಹೃದಯ ಸಂಬಂದಿ ಕಾಯಿಲೆ, ಕಿಡ್ನಿ, ಕಣ್ಣಿನ ಪೊರೆಗಳನ್ನು ಗುರುತಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಮುಟ್ಟಿನ ಆರೋಗ್ಯ ತಿಳಿವಳಿಕೆ ಮತ್ತು ವೈಯಕ್ತಿಕ ಆರೋಗ್ಯ, ಪೌಷ್ಟಿಕ ಆಹಾರದ ಮಹತ್ವ ಕುರಿತು ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ.ಮಂಜುನಾಥ ಕುದರಿ, ಶಂಕ್ರಮ್ಮ ಹೂಲಿ, ಜೆ.ಎಂ. ಖಾಜಿ, ದಾವಲಬಿ ಖಾಲೇಕಾನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net