

ಬೈಲುಕುಪ್ಪೆ: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ. ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ನೂತನ ಸಭಾ ಭವನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ಹುಣಸವಾಡಿ ಗ್ರಾಮ ಪಂಚಾಯಿತಿಯಲ್ಲಿ ಸ್ಥಳೀಯ ಅನುದಾನ ಬಳಸಿಕೊಂಡು ನೂತನ ಸಭಾ ಭವನ ನಿರ್ಮಾಣ ಹಾಗೂ ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಚುನಾಯಿತ ಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಎಂತಹ ಕೆಲಸವನ್ನೂ ಸಾಧಿಸಬಹುದು ಎಂಬುದಕ್ಕೆ ಈ ಪಂಚಾಯಿತಿಯಲ್ಲಿ ನಿರ್ಮಾಣ ಮಾಡಿರುವ ಸಭಾ ಭವನವೇ ಸಾಕ್ಷಿ. ಚುನಾವಣೆ ತನಕ ಮಾತ್ರ ಪಕ್ಷ, ನಂತರ ಅಭಿವೃದ್ಧ್ದಿ ಕಾರ್ಯ ಮಾಡುವುದರಿಂದ ಜನಮನ್ನಣೆಯ ಜತೆಗೆ ಗ್ರಾಮಾಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಮಾತನಾಡಿ, ಸಚಿವರು, ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಗಳು, ಉಪಾಧ್ಯಕ್ಷರು, ಸದಸ್ಯರು ಹಾಗೂ ಜನರ ಸಹಕಾರದಿಂದ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.
ತಹಸೀಲ್ದಾರ್ ನಿಸರ್ಗಪ್ರಿಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ನಿರ್ದೇಶಕರಾದ ಭೂತನಹಳ್ಳಿ ರವಿ, ಆಲನಹಳ್ಳಿ ರಾಜು, ಮಂಜುನಾಥ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಿ.ಆರ್.ಮಂಜುನಾಥ್, ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ದೇವಾ,ಎ.ಜೆ.ಸ್ವಾಮಿ, ನಾಗರಾಜ್, ಶಶಿಕಲಾ, ಗೌರಮ್ಮ, ಅಶೋಕ್, ರತ್ನಮ್ಮ, ಮಂಜುಳಾ, ಸುಶೀಲಮ್ಮ, ಲಕ್ಷ್ಮಮ್ಮ, ಶಾಂತೇಗೌಡ, ಸುಬ್ರಹ್ಮಣ್ಯ, ಜ್ಯೋತಿ, ರೇಣುಕಾ ಮುಖಂಡರಾದ ಗಣೇಶ್, ಬಿ.ಜೆ.ಬಸವರಾಜ್, ರಹಮತ್ ಜಾನ್ ಬಾಬು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.