

ಗೋಣಿಕೊಪ್ಪಲು: ನೂತನವಾಗಿ ಅಭಿವೃದ್ಧಿಗೊಂಡ ಗೋಣಿಕೊಪ್ಪಲು ಬೈಪಾಸ್ ರಸ್ತೆ ಹಾಗೂ ಆರೆಂಜ್ ಸೊಸೈಟಿ ರಸ್ತೆಯನ್ನು ಭಾನುವಾರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇವೆಗೆ ಮುಕ್ತಗೊಳಿಸಿದರು.
ಬಳಿಕ ಮಾತನಾಡಿ, ಈ ಭಾಗದ ರಸ್ತೆಗಳು ತೀವ್ರ ಹದಗೆಟ್ಟಿರುವ ಬಗ್ಗೆ ಸಾರ್ವಜನಿಕರಿಂದ ಹಲವು ಮನವಿಗಳು ಬಂದಿವೆೆ. ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿ ಅಗತ್ಯಕ್ಕನುಸಾರ ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಇಂದು ಈ ಎರಡು ರಸ್ತೆಗಳನ್ನು ಲೋಕಾರ್ಪಣೆ ಮಾಡಿರುವುದು ತನಗೆ ಸಂತೋಷ ಉಂಟು ಮಾಡಿದೆ ಎಂದರು. ಮುಂದಿನ ದಿನಗಳಲ್ಲಿ ಕ್ಷೇತ್ರಾದ್ಯಂತ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯತಿ ಉಪಾಧ್ಯಕ್ಷೆ ಮಂಜುಳಾ, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಇದ್ದರು.