ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ
Published on

ರಾವಂದೂರು: ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಆರ್.ಹೊಸಹಳ್ಳಿ, ನಂದಿಪುರ, ಆ.ಡಿ.ಕೊಪ್ಪಲು ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಬೇಕಾಗುವ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಮಂಟಿಕೊಪ್ಪಲಿನಿಂದ ಗಂಗೂರು ಮುಖ್ಯರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರಾಗಿದ್ದು, ಶೀಘ್ರ ರಸ್ತೆ ಕಾಮಗಾರಿ ಕೆಲಸ ನಡೆಯಲಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ರಾಮತ್ ಜಾನ್ ಬಾಬು, ಗ್ರಾಪಂ ಅಧ್ಯಕ್ಷ ಶೈಲಜಾ ಅಶೋಕ್, ಉಪಾಧ್ಯಕ್ಷ ಮಾಲಾಶ್ರೀ, ನೀಲಕಂಠ, ಕೇಶವಮೂರ್ತಿ, ಕಲ್ಪನಾ ಯತಿರಾಜ್, ಎಂ.ಕೆ.ಸುರೇಶ್, ಜಯಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್, ಡಾಕ್ಟರ್ ಸೋಮಯ್ಯ, ಇ.ಒ.ಸುನೀಲ್, ಇಂಜಿನಿಯರ್ ಮಲ್ಲಿಕಾರ್ಜುನ್, ದಿನೇಶ್, ಮಹೇಂದರ್, ಸೋಮಶೇಖರ್, ಪಿಡಿಒ ನಾಗಶೆಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net