ಬನ್ನಂಜೆ ರಾಜಾಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

IMG_20230831_190408.jpg
Published on

ಬೆಳಗಾವಿ : ಅಂಕೋಲಾದ ಖ್ಯಾತ ಉದ್ಯಮಿ ನಾಯಕ ಅವರ ಹತ್ಯೆ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಾ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜಾನನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ  ನಗರದಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಚಿಕಿತ್ಸೆಗೆ ಒಳಪಡಿಸಲಾಯಿತು.  

ಖೈದಿ ಬನ್ನಂಜೆ ರಾಜಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬಿಗಿ ಬಂದೋಬಸ್ತ್‌ನಲ್ಲಿ ಆಸ್ಪತ್ರೆಗೆ ಕರೆತಂದು ಇಎನ್‌ಟಿ ವಿಭಾಗದ ಆಸ್ಪತ್ರೆಯಲ್ಲಿ ತಪಾಸಿಸಲಾಯಿತು. ಅಲ್ಲದೇ,  ಸಿಟಿ ಸ್ಕ್ಯಾನ್ ಮಾಡಿಸಿಕೊಂಡು ಕಾರಾಗೃಹಕ್ಕೆ ವಾಪಸ್ ಕರೆದೊಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net