ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರರಿಬ್ಬರ ಸಾವು

30 smg 9
Published on

ಶಿವಮೊಗ್ಗ: ತಾಲೂಕಿನ ಕುಂಸಿ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ಹೊರವಲಯದ ಪುರಲೆ ನಿವಾಸಿ ಅನಿಲ್ (19) ಮತ್ತು ಗುರುಪುರದ ರಂಜಿತ್(18) ಮೃತರು.

ಎರಡು ದಿನಗಳ ಹಿಂದೆ ಹೊಸನಗರದಲ್ಲಿ ಜಾತ್ರೆ ನಿಮಿತ್ತ ಸಂಬಂಧಿಕರ ಮನೆಗೆ ತೆರಳಿದ್ದರು. ಸೋಮವಾರ ಮಧ್ಯಾಹ್ನ ಹೊಸನಗರದಿಂದ ಕುಂಸಿ ಮಾರ್ಗವಾಗಿ ಬೈಕ್‌ನಲ್ಲಿ ಬರುವಾಗ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದೆ.

ವಾಹನವೊಂದನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅನಿಲ್ ಮತ್ತು ರಂಜಿತ್‌ನನ್ನು ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ರಂಜಿತ್ ಮಾರ್ಗಮಧ್ಯೆಯೇ ಮೃತಪಟ್ಟರೆ ಅನಿಲ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net