ಬಂಟ್ವಾಳ: ತಾಲೂಕಿನ ತುಂಬೆ ಸಮೀಪದ ಕಡೆಗೋಳಿಯಲ್ಲಿ ಭಾನುವಾರ ರಾತ್ರಿ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಾಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹಸವಾರ ಸಂದೀಪ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಗೆಳೆಯರಿಬ್ಬರು ಕೆಲಸ ಮುಗಿಸಿ ಮನೆಗೆ ಜತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟು ಸಂದೀಪ್ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಕಡೆಗೋಳಿ ನಿವಾಸಿಗಳಾದ ಪ್ರವೀಣ್ ಹಾಗೂ ಸಂದೀಪ್ ಮೃತ ದುರ್ದೈವಿಗಳು ಇಬ್ಬರು ಚಿಕ್ಕ ವಯಸ್ಸಿನಿಂದಲೇ ಆತ್ಮೀಯ ಗೆಳೆಯರು. ಇಬ್ಬರು ಸೇಲ್ಸ್‌ಮನ್ ಕೆಲಸಗಾರರಾಗಿದ್ದರು. ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಇಬ್ಬರು ಆತ್ಮೀಯ ಸ್ನೇಹಿತರು ಪ್ರಾಣ ಕಳೆದುಕೊಂಡಿದ್ದಾರೆ.