ನಿಯಂತ್ರಣ ತಪ್ಪಿ ಖಾಸಗಿ ಬಸ್‌ಪಲ್ಟಿ

5 jyp 1
Published on

ಜಯಪುರ: ಮೇಗುಂದಾ ಹೋಬಳಿ ವ್ಯಾಪ್ತಿಯ ಅಗಳಗಂಡಿ ಗ್ರಾಮದ ಬೆಳವಿನ ಕುಂಬ್ರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ಪಲ್ಟಿಯಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಶೃಂಗೇರಿ ಶಾರದಾಂಬೆ ದರ್ಶನ ಪಡೆದು ಹೊರನಾಡಿಗೆ ಹೋಗುತ್ತಿರುವಗ ಬೆಳವಿನ ಕುಂಬ್ರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಇದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶೃಂಗೇರಿಯಿಂದ ಹೊರನಾಡಿಗೆ ಗಡಿಕಲ್ಲು, ಹೆಗ್ಗಾರು ಕುಡಿಗೆ, ಅರೇಹಳ್ಳ, ಕೋಟೆ ತೋಟ ಮಾರ್ಗವಾಗಿ ಪ್ರತಿನಿತ್ಯ 500ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಗೂಗಲ್ ಮ್ಯಾಪ್ ಆಧರಿಸಿ ಚಲಿಸುತ್ತಿದ್ದಾರೆ. ಈ ರಸ್ತೆಯಲ್ಲಿ ಒಂದೂ ಸೂಚನಾ ಲಕ ಇಲ್ಲದಿರುವುದು ಅಪಘಾತಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸೂಚನಾ ಲಕ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net