ಖಾಸಗಿ ಬಸ್ ಹರಿದು ಬೈಕ್ ಸವಾರ ಸಾವು

bhadravati rural police station
ಭದ್ರಾವತಿ ಗ್ರಾಮಾಂತರ ಠಾಣೆ
Published on

ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಗುರುವಾರ ಮಧ್ಯಾಹ್ನ ಖಾಸಗಿ ಬಸ್ ಹರಿದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಜಂಕ್ಷನ್ ಸಮೀಪದ ರಂಗನಾಥಪುರದ ಶಂಕರಪ್ಪ (60) ಮೃತ ಬೈಕ್ ಸವಾರ. ಕಿರಾಣಿ ಅಂಗಡಿಗೆ ಸಾಮಗ್ರಿ ತರಲು ಲಕ್ಕವಳ್ಳಿಗೆ ಟಿವಿಎಸ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಶಂಕರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದು ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net