ಯುವತಿ ಅಸ್ವಸ್ಥ, ಆಸ್ಪತ್ರೆಯೊಳಗೆ ಧಾವಿಸಿದ ಖಾಸಗಿ ಬಸ್

udp-5-bus
Published on

ಉಡುಪಿ: ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬಸ್ಸನ್ನೇ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ನವೀನ್ ಎಂಬ ಹೆಸರಿನ ಬಸ್ ಉಡುಪಿ ಹಳೆ ತಾಲೂಕು ಕಚೇರಿ ಬಳಿ ಬಂದಾಗ ಯವತಿಯೋರ್ವಳು ಅಸ್ವಸ್ಥಳಾಗಿ ಬಸ್ಸಿನಲ್ಲೇ ವಾಂತಿ ಮಾಡಿಕೊಂಡು ಪ್ರಜ್ಞಾಹಿನ ಸ್ಥಿತಿ ತಲುಪಿದ್ದು, ಕೂಡಲೇ ಬಸ್ಸಿನ ಚಾಲಕ ಶಶಿಕಾಂತ್ ಬಸ್ಸನ್ನು ಪಕ್ಕದ ಟಿ ಎಂ ಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದತ್ತ ಕೊಂಡೊಯ್ದು, ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಬಳಿಕ ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಯ ಚಿಕಿತ್ಸೆಗೆ ಸಹಕಾರ ನೀಡಿದ್ದಾರೆ. ಬಸ್ ಚಾಲಕ ಶಶಿಕಾಂತ್ ಮತ್ತು ನಿರ್ವಾಹಕ ಸಲೀಂ ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net