ಉಡುಪಿಯಲ್ಲಿ ಜುಲೈ 1 ರಿಂದ ಬಸ್ ಸಂಚಾರ, ಟಿಕೆಟ್ ದರ ಶೇ.25 ಏರಿಕೆ

bus new
Published on

ಉಡುಪಿ: ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಸಿಟಿ ಹಾಗೂ ಸರ್ವೀಸ್ ಖಾಸಗಿ ಬಸ್‌ಗಳು ಸಂಚಾರ ಜುಲೈ 1 ರಿಂದ ಹಂತಹಂತವಾಗಿ ರಸ್ತೆಗಿಳಿಯಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ಡಿಸಿ.ಜಿ.ಜಗದೀಶ್ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳು, ಬಸ್ ಮಾಲೀಕರ ಸಭೆಯಲ್ಲಿ ಜುಲೈ 1 ರಿಂದ ಬಸ್ ಓಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್‌ಚಂದ್ರ, ಬಸ್ ಮಾಲೀಕರ ಸಂಘದ ಪದಾಧಿಕಾರಿಗಳಾದ ಕುಯ್ಲಡಿ ಸುರೇಶ್ ನಾಯಕ್, ಸದಾನಂದ ಛಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಉಪಸ್ಥಿತರಿದ್ದರು.

ದರ ಹೆಚ್ಚಳ: ಪ್ರಸಕ್ತ ಡೀಸೆಲ್ ದರ ಏರಿಕೆ, ಶೇ.50 ಆಸನ ಭರ್ತಿ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಹೊರಡಿಸಿದ ನೊಟಿಫಿಕೇಶನ್ ಪ್ರಕಾರ ಸೆಸ್ ವಿಧಿಸಲು ಅವಕಾಶವಿದೆ. ಶೇ.25 ಟಿಕೆಟ್ ದರ ಹೆಚ್ಚಿಸಲಾಗುವುದು ಎಂದು ಖಾಸಗಿ ಬಸ್ ಮಾಲೀಕರ ಸಂಘದ ಕುಯಿಲಾಡಿ ಸುರೇಶ್ ನಾಯಕ್ ವಿಜಯವಾಣಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net