

ಬೆಂಗಳೂರು: ಬೆಂಗಳೂರಿನ ವೀರಭದ್ರ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೆಡ್ನಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಖಾಸಗಿ ಬಸ್ಗಳು ಸುಟ್ಟು ಭಸ್ಮವಾಗಿದೆ.
ಖಾಸಗಿ ಬಸ್ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ 10ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿ ತಗುಲಿದ್ದು, ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.