

ಬೆಳಗಾವಿ: ಕರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಧೀನ ಖಾಸಗಿ ಆರೋಗ್ಯ ಸಂಸ್ಥೆಗಳು, ಆಸ್ಪತ್ರೆಗಳನ್ನು ತೆರೆಯಲು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಆದೇಶಿಸಿದ್ದಾರೆ.
ರೋಗಿಗಳಿಗೆ ಚಿಕಿತ್ಸೆ ನೀಡಿರುವ ಬಗ್ಗೆ ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ಇ-ಮೇಲ್ ಮುಖಾಂತರ ವರದಿ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಕಾಯ್ದೆ ಪ್ರಕಾರ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ತೆರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಂಕಷ್ಟವನ್ನು ‘ವಿಜಯವಾಣಿ’ ಪತ್ರಿಕೆಯಲ್ಲಿ ಏ. 10ರಂದು ‘ಕೀ ತೆರೆಯದ ಖಾಸಗಿ ಆಸ್ಪತ್ರೆಗಳು’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.