ಖಾಸಗಿ ಶಾಲಾ ವಾಹನ ಪಲ್ಟಿ

24Gkk1A-Crime.jpg
Published on

ಬೆಳಗಾವಿ: ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಖಾಸಗಿ ಶಾಲೆಗೆ ಸೇರಿದ ಬಸ್ ಸ್ಟೇರಿಂಗ್ ರಾಡ್ ಮುರಿದು ಪಲ್ಟಿಯಾದ ಘಟನೆ ಬುಧವಾರ ಮೇಲ್ಮಟ್ಟಿ ಬಳಿ ಸಂಭವಿಸಿದೆ. ವಾಹನದಲ್ಲಿದ್ದ 17 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಗೋಕಾಕ ವಲಯ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹಾಗೂ ಗ್ರಾಮೀಣ ಠಾಣೆ ಪಿಎಸ್‌ಐ ಕಿರಣ ಮೋಹಿತೆ, ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net