ಖಾಸಗಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ

LOKESH TALIKATTE hlk
Published on

ಚಳ್ಳಕೆರೆ: ಸರ್ಕಾರ ಆದೇಶಗಳಿಂದ ಖಾಸಗಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪುತ್ತಿವೆ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದರು.

ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಟ್ರಸ್ಟ್ ನಗರದ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ, ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

ವಾರ್ಷಿಕ ನವೀಕರಣ ಮತ್ತು ಭೂ ಪರಿವರ್ತನೆಯಲ್ಲಿ ಸರಳೀಕರಣ ಮಾಡಬೇಕು. 35 ವರ್ಷಗಳಿಂದ ಕನ್ನಡ ಮಾಧ್ಯಮದಲ್ಲಿ ದುಡಿದ ಶಿಕ್ಷಕರಿಗೆ ಸಂಬಳ ಸಿಗುತ್ತಿಲ್ಲ. ಅನುದಾನರಹಿತ ಶಾಲಾ ಮಕ್ಕಳಿಗೂ ಬಿಸಿಯೂಟ ಜಾರಿ ಮಾಡಬೇಕು. ಶಿಕ್ಷಕರನ್ನು ಸಾರ್ವತ್ರಿಕವಾಗಿ ಸಮಾನ ದೃಷ್ಟಿಯಿಂದ ಕಾಣಬೇಕು. ರಾಜ್ಯಮಟ್ಟದ ಇಲಾಖೆ ಪ್ರಶಸ್ತಿಗೆ ಖಾಸಗಿ ಶಾಲಾ ಶಿಕ್ಷಕರನ್ನು ಪರಿಗಣಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net