

ಹೊನ್ನಾವರ: ಗೇರಸೊಪ್ಪ ಬಳಿ ಆಂದ್ರಪ್ರದೇಶದಿಂದ ಉತ್ತರಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಆಯಾತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ 14ವರ್ಷದ ಬಾಲಕ ಪಕ್ರುದ್ದೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೂ 10ಕ್ಕೂ ಹೆಚ್ಚು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಂದ್ರ ಹಾಗೂ ಬೆಂಗಳೂರು ಮೂಲದವರಾಗಿದ್ದು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮಣಿಪಾಲ್ ಗೆ ಕೊಂಡೊಯ್ಯಲಾಗಿದೆ. ಘಟನೆ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.