ಸವಲತ್ತು ವಿತರಣಾ ಕಾರ್ಯಕ್ರಮ

Sul_Savalathu
Published on

ಸುಳ್ಯ: ಕೃಷಿ ಇಲಾಖೆ ಮಂಗಳೂರು, ಮಂಗಳೂರು ಜಿಲ್ಲಾ ಪಂಚಾಯಿತಿ, ಸುಳ್ಯ ತಾಲೂಕು ಪಂಚಾಯಿತಿ, ಸಂಪಾಜೆ ಗ್ರಾಮ ಪಂಚಾಯಿತಿ, ಸುಳ್ಯ ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಆಶ್ರಯದಲ್ಲಿ ವಿವಿಧ ಸವಲತ್ತು ವಿತರಣೆ ಹಾಗೂ ತರಬೇತಿ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಯಿತು.

ಹಿರಿಯ ವಿಜ್ಞಾನಿ ಡಾ.ಟಿ.ಜೆ.ರಮೇಶ್ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದಿಂದ ಪರಿಶಿಷ್ಟ ಜಾತಿ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು, ಕೃಷಿ ವಿಜ್ಞಾನ ಕೇಂದ್ರದಿಂದ ತಾಲೂಕು ಸಂಜೀವಿನಿ ಒಕ್ಕೂಟದ ಕೃಷಿ ಸಖಿಯರ ಮುಖಾಂತರ ಸಿಗುತ್ತಲಿರುವ ಸೌಲಭ್ಯಗಳ ಬಗ್ಗೆ ಹಾಗೂ ಸಂಪಾಜೆ ಗ್ರಾಪಂ ಮತ್ತು ಜನರ ನಡುವಿನ ಹೊಂದಾಣಿಕೆ, ಗ್ರಾಮದ ಅಭಿವೃದ್ದಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷ, ಸದಸ್ಯರಾದ ಜಿ.ಕೆ.ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಅನುಪಮ ಮೊದಲಾದವರು ಇದ್ದರು.

ಪ.ಜಾತಿ, ಪ.ಪಂಗಡದ ಫಲಾನುಭವಿಗಳಿಗೆ ಡ್ರಮ್, ಟರ್ಪಾಲು ವಿತರಿಸಲಾಯಿತು. ಗ್ರಾಪಂ ವತಿಯಿಂದ ಗ್ರಾಮದ ಮಹಿಳೆಯರಿಗಾಗಿ ಕ್ರೀಡಾಕೂಟ ವಿವಿಧ ಆಟೋಟ ಕಾರ್ಯಕ್ರಮ ನಡೆಸಲಾಗಿದ್ದು ವಿಜೇತರಿಗೆ ಬಹುಮಾನ ನೀಡಲಾಯಿತು. ಇದೇ ವೇದಿಕೆಯಲ್ಲಿ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು.

ಪಿಡಿಒ ಸರಿತಾ ಡಿಸೋಜಾ ಸ್ವಾಗತಿಸಿದರು. ಅಂಗನವಾಡಿ ಶಿಕ್ಷಕಿ ಧರ್ಮಕಲಾ ವಂದಿಸಿದರು. ಮೋಹಿನಿ ವಿಶ್ವನಾಥ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net