ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸವಲತ್ತು

05-FEB-GPT-1
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ಕಾರ್ಯಕ್ರಮಕ್ಕೆ ಶಾಸಕ ಗಣೇಶ್ ಪ್ರಸಾದ್ ಚಾಲನೆ ನೀಡಿದರು. ಪ್ರೊ.ರಮೇಶ್, ಕುಮಾರಸ್ವಾಮಿ ಜಗದೀಶ್, ಮಹೇಶ್, ಅಣ್ಣಯ್ಯಸ್ವಾಮಿ, ಕುಮಾರ್, ರಾಜಗೋಪಾಲ್, ಸುರೇಂದ್ರ, ಭಾಗ್ಯಮ್ಮ, ಶಿವಕುಮಾರ್, ಪುಟ್ಟಸ್ವಾಮಿ, ಶಾಂತಾರಾಂ, ಚಂದ್ರಶೇಖರ್, ಶಿವಸ್ವಾಮಿ ಇದ್ದರು.
Published on

ಗುಂಡ್ಲುಪೇಟೆ: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ಸವಲತ್ತುಗಳನ್ನೂ ಒದಗಿಸಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆ ನೀಡಿದರು.

ಬುಧವಾರ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎರಡನೇ ಅಂತಸ್ತಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ಕಾಲೇಜಿನಲ್ಲಿ ಸದ್ಯ ಸಾವಿರಾರು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಇನ್ನೂ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಸಲುವಾಗಿ ಪ್ರಯೋಗಾಲಯ, ಶೌಚಗೃಹ ಸೇರಿದಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು. ಗ್ರಾಮಾಂತರ ಪ್ರದೇಶಗಳಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರಿಕೆ ನಿಲುಗಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ.ರಮೇಶ್, ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷ ಕುಮಾರಸ್ವಾಮಿ, ಕರ್ನಾಟಕ ಗೃಹ ನಿರ್ಮಾಣ ಮಂಡಲಿಯ ಎಇಇ ಜಗದೀಶ್, ಕಾರ್ಯಪಾಲಕ ಇಂಜಿನಿಯರ್ ಮಹೇಶ್, ಪುರಸಭೆ ಸದಸ್ಯರಾದ ಅಣ್ಣಯ್ಯಸ್ವಾಮಿ, ಕುಮಾರ್, ರಾಜಗೋಪಾಲ್, ಮಾಜಿ ಸದಸ್ಯರಾದ ಸುರೇಂದ್ರ, ಭಾಗ್ಯಮ್ಮ, ಶಿವಕುಮಾರ್, ಪುಟ್ಟಸ್ವಾಮಿ, ಶಾಂತಾರಾಂ, ಉಪನ್ಯಾಸಕರಾದ ಚಂದ್ರಶೇಖರ್, ಶಿವಸ್ವಾಮಿ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net