ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ದಾಖಲೆ ವ್ಯವಹಾರ

Mul_Priyadarshini
Published on

ಹಳೆಯಂಗಡಿ: ಸದಸ್ಯರ ಪ್ರೋತ್ಸಾಹ, ಗ್ರಾಹಕರ ಸಹಕಾರ, ಆಡಳಿತ ವರ್ಗದವರ ವಾರ್ಗದರ್ಶನ ಹಾಗೂ ಸಿಬ್ಬಂದಿ ಕಾರ್ಯಶ್ರಮತೆಯಿಂದ 2024-25 ನೇ ಸಾಲಿನಲ್ಲಿ ಹಳೆಯಂಗಡಿಯ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ 349.77 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.

ಸೊಸೈಟಿಯ ಅವಲೋಕನ ಸಭೆಯಲ್ಲಿ ಅವರು ಮಾಹಿತಿ ನೀಡಿದರು. 2024-25ನೇ ಸಾಲಿನಲ್ಲಿ ಉತ್ತಮ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಉತ್ತಮ ಲಾಭಾಂಶ ನೀಡಲಾಗುವುದು ಎಂದರು.

ಅವಲೋಕನ ಸಭೆಯಲ್ಲಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net