

ಹಳೆಯಂಗಡಿ: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ 2024-25ನೇ ಸಾಲಿನ ಸಾಧನೆ ಮತ್ತು ಕಾರ್ಯ ವೈಖರಿ ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನಾ ಪ್ರಶಸ್ತಿಯನ್ನು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನೀಡಿ ಪುರಸ್ಕರಿಸಿದೆ. ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ ಬರ್ನಾಡ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್ ಅವರನ್ನು ಗೌರವಿಸುವ ಮೂಲಕ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.
2024-25 ನೇ ಸಾಲಿನಲ್ಲಿ 351 ಕೋಟಿ ರೂಪಾಯಿ ವಹಿವಾಟು, ಶೇಕಡ 98.5 ಸಾಲ ವಸೂಲಾತಿ, 30 ಕೋಟಿ ನಿರಖು ಠೇವಣಿ ಹೊಂದಿತ್ತು. ಒಟ್ಟು 20 ಸಿಬ್ಬಂದಿ ಹೊಂದಿರುವ ಈ ಸೊಸೈಟಿ ಈ ಬಾರಿ ಶೇಕಡಾ 8ರ ದರದಲ್ಲಿ ಪಾಲು ಮುನಾಪೆಯನ್ನು ಸದಸ್ಯರಿಗೆ ಹಂಚಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಉಮಾನಾಥ ಜೆ. ಶೆಟ್ಟಿಗಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ ನಿರ್ದೇಶಕರಾದ ಡಾ.ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.