

ಕಲಬುರಗಿ : ರಾಜ್ಯದ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು
ಗುರುವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ, ಕೆ.ಕೆ.ಅರ್.ಡಿ.ಬಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಐ.ಜಿ.ಪಿ ಅಜಯ್ ಹಿಲೋರಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಆಕಾಶ ಶಂಕರ್, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಡಿ.ಸಿ.ಎಫ್. ಸುಮಿತ್ ಪಾಟೀಲ, ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.