ಮೇ. 4ರಂದು ನಗರಕ್ಕೆ ಪ್ರೀಯಾಂಕಾ ಗಾಂಧಿ: ಸಚಿವ ಎಚ್. ಕೆ ಪಾಟೀಲ

u44s1ef8_priyanka-gandhi_625x300_07_November_23
Published on

ಗದಗ: ಮೆ. 4ರಂದು ಸಂಜೆ 4.30ಕ್ಕೆ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ಗದಗ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಎಚ್. ಕೆ ಪಾಟೀಲ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ ಗಳನ್ನು ಜನರಿಗೆ ತಲುಪಿಸದಂತೆ ಕಾನೂನಾತ್ಮಕ ತೊಡಕು ಸೃಷ್ಟಿಸುತ್ತಿದ್ದಾರೆ. ಅನಾವಶ್ಯಕವಾಗಿ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಡ್ ಗೆ ಅಡ್ಡಿ ಮಾಡುತ್ತಿದ್ದಾರೆ ಎಂದರು.

ಪಂಚಾಯತ್ ಮಟ್ಟದಿಂದ ಶಹರ ಮಟ್ಟದಲ್ಲಿ ಭೇಟಿ ನೀಡಿ ಸಭೆ ಮಾಡಿ ಪ್ರಚಾರ ಕೈಗೊಂಡಿದ್ದೇವೆ. ಎಲ್ಲ ಕಡೆ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿದೆ ಎಂದು ತಿಳಿಸಿದರು. 

ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಬಿಜೆಪಿ ಕೆಟ್ಟ ಮನೋಭಾವನೆ ಇಟ್ಟುಕೊಂಡು ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರಕ್ಕೆ ಅಡ್ಡಿ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳ ಗಮನಕ್ಕೆ ತಂದು ಮನವಿ ಸಲ್ಲಿಸಿದ್ದೇವೆ. ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ಕೊರ್ಟ್ ಮೊರೆ ಹೋಗಲಾಗುವುದು ಎಂದರು.

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಬಿ. ಬಿ ಅಸೂಟಿ, ಅಕ್ಬರಸಾಬ್ ಬಬರ್ಚಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net