ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನ ಇಂದು

photography
Published on

ಸುಂಟಿಕೊಪ್ಪ: ಕೊಡಗು ಮತ್ತು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಆ.19 ರಂದು ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನ ಆಯೋಜಿಸಲಾಗಿದೆ.

ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಉದ್ಯಮಿ ಹೆನ್ರಿಕ್ ಮಾರ್ಟಿನ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಹಿರಿಯ ಛಾಯಾಗ್ರಾಹಕರಾದ ಸಂದೀಪ್ ಮತ್ತು ಮಹಮ್ಮದ್ ಹನೀಫ್ ಅವರನ್ನು ಸನ್ಮಾನಿಸಲಾಗುತ್ತದೆ. ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಛಾಯಾಚಿತ್ರ, ವಿಡಿಯೋ, ರೀಲ್ಸ್ ಸ್ಪರ್ಧೆಗಳ ವಿಜೇತರಿಗೂ ಬಹುಮಾನ ವಿತರಿಸಲಾಗುತ್ತದೆ.

ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಹಿರಿಯ ವರದಿಗಾರರಿಗೆ ಸ್ಥಾಪಿಸಿರುವ ದತ್ತಿ ಪ್ರಶಸ್ತಿಗೆ ಸುಂಟಿಕೊಪ್ಪದ ಹಿರಿಯ ವರದಿಗಾರ ಕೆ.ಶಿವಣ್ಣ ಆಯ್ಕೆಯಾಗಿದ್ದು, ಅವರನ್ನೂ ಸನ್ಮಾನಿಸಲಾಗುತ್ತದೆ ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net