ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿಜಿಎಸ್ ಶಾಲೆಗೆ ಬಹುಮಾನ

16ss2rasaprshne sparde
ಸುಪ್ರಜ ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿಗಳ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು.
Published on

ಶನಿವಾರಸಂತೆ: ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸರ್ಧೆಯನ್ನು ಸುಪ್ರಜ ಗುರುಕುಲ ಶಾಲೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಘಟಕದ ನಿರ್ದೇಶಕ ಮತ್ತು ಜಾನಪದ ಕಲಾವಿದ ಸುರೇಶ್ ಮೊಗೆರಾ ಜಾನಪದ ಗಾಯನದೊಂದಿಗೆ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿದರು.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗೌಡಳ್ಳಿ ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳಾದ ನಿಶಾನ್‌ಗೌಡ, ಡಿ.ಜಿ.ಸೇವಂತ್, ಕೆ.ಕೆ.ಚಿರಾಗ್ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಸುಪ್ರಜ ಗುರುಕುಲ ಶಾಲೆಯ ವಿದ್ಯಾರ್ಥಿಗಳಾದ ಬಿ.ಸಾರ್ಥಕ್, ಪ್ರದೀಪ್, ಆತ್ಮೀಯಾ, ಕೆ.ಎಂ.ಇನಿಕಾ ತಂಡ ದ್ವಿತೀಯ ಸ್ಥಾನ ಹಾಗೂ ಬಾಪೂಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸ್ಫೂರ್ತಿ, ಅಸ್ಪಿಯಾ, ಅಪ್ಸಾನಾ ತಂಡ ತೃತೀಯ ಸ್ಥಾನ ಪಡೆದುಕೊಂಡಿತು.
ಪ್ರೌಢಶಾಲಾ ವಿಭಾಗದಲ್ಲಿ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರಾಢಶಾಲೆಯ ವಿದ್ಯಾರ್ಥಿನಿಯರಾದ ವಿನುತಾ, ಲೋಕೇಶ್ವರಿ, ಹರಿಣಾಕ್ಷಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕೆ.ಎಚ್.ಪ್ರೇಕ್ಷಿತ್, ಬಿ.ಟಿ.ಚೈತನ್ಯ ಮತ್ತು ಎನ್.ಡಿ.ಯಶಸ್ ತಂಡ ದ್ವಿತೀಯ ಸ್ಥಾನ ಹಾಗೂ ಬಾಪೂಜಿ ಶಾಲೆಯ ವಿದ್ಯಾರ್ಥಿಗಳಾದ ಇಮ್ತಿಯಾಜ್, ಅಸಿಫ್, ದಿಶಾಂತ್ ತಂಡ ತೃತೀಯ ಸ್ಥಾನ ಪಡೆದುಕೊಂಡಿತು.

ಸ್ಪರ್ಧಾ ವಿಜೇತರಿಗೆ ನ.18 ರಂದು ಸುಪ್ರಜ ಗುರುಕುಲ ಶಾಲೆಯಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.

ಜಾನಪದ ಪರಿಷತ್ ಘಟಕದ ಅಧ್ಯಕ್ಷೆ ಮತ್ತು ಸುಪ್ರಜ ಗುರುಕುಲ ಶಾಲೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ, ಕಾರ್ಯದರ್ಶಿ ಚೆರಿಯಮನೆ ಸುರೇಶ್, ನಿರ್ದೇಶಕ ಭಾಸ್ಕರ್ ಮುಳ್ಳೂರು, ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಶಿಕ್ಷಕ ಯೋಗೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net