ಪ್ರತಿಭಾವಂತ ಮಕ್ಕಳಿಗೆ ಬಹುಮಾನ 19ರಂದು

PRIZE
Published on

ಕಲಘಟಗಿ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ನೌಕರರ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರ 99ನೇ ವಾರ್ಷಿಕ ಮಹಾಸಭೆ ಹಾಗೂ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆ. 19ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. 2022-23ನೇ ಸಾಲಿನ ಮಾರ್ಚ್ ಮತ್ತು ಏಪ್ರಿಲ್​ನಲ್ಲಿ ಏರ್ಪಡಿಸಿದ್ದ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net