ಸ್ಮರಣ ಶಕ್ತಿ ಸ್ಪರ್ಧೆಯಲ್ಲಿ ಬಹುಮಾನ

meghana
Published on

ಕುಂದಾಪುರ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಉಡುಪಿ ಇವರು ನಡೆಸಿದ ಸ್ಮರಣ ಶಕ್ತಿ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯರಾದ ಮೇಘನಾ ಪ್ರಕಾಶ್ ಶ್ಯಾನುಭಾಗ್ ಹಾಗೂ ಶರಣ್ಯ ವಿ. ಕಾಮತ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net