

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ : ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮೂಡುಬಿದಿರೆಯ ಅಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಫ್ಯೂಶನ್ ಹ್ಯಾಕಥಾನ್ನ ಓಪನ್ಥೀಮ್ವಿಭಾಗದಲ್ಲಿ ಪ್ರಥಮ ಬಹುಮಾನ ಹಾಗೂ ವೆಬ್ಡೆವೆಲಪ್ ಥೀಮ್ ವಿಭಾಗದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿ ತಂಡವನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.